ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಸದಾನಂದ ಗೌಡ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ ಸಂಸದ ಶ್ರೀನಿವಾಸ್ ಪ್ರಸಾದ್ ಕೂಡ ನಿವೃತ್ತಿ ಘೋಷಿಸಿದ್ದಾರೆ.
ಚಾಮರಾಜನಗರ ಕ್ಷೇತ್ರದ ಸಂಸದರಾಗಿರುವ ವಿ ಶ್ರೀನಿವಾಸ್ ಪ್ರಸಾದ್ ಅವರು 2024 ರ ಮಾರ್ಚ್ 17 ರಂದು ದೊಡ್ಡ ಸಮಾವೇಶ ನಡೆಸಿ ಅಂದೇ ಅಧಿಕೃತವಾಗಿ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ್ದ ವಿ ಶ್ರೀನಿವಾಸ್ ಪ್ರಸಾದ್ ಇದು ನನ್ನ ಕೊನೆಯ ಚುನಾವಣೆ, ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದರು.ಮಾರ್ಚ್ 17 ಕ್ಕೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ, ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.