ಮಂಡ್ಯ: ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ ಎನ್ನುವ ತಮ್ಮ ಹಿಂದಿನ ಹೇಳಿಕೆಗೆ ಈಗಲು ಬದ್ಧವಿರುವುದಾಗಿ ಸಂಸದೆ ಸುಮಲತಾ ಅಂಬರೀಶ್ ಪುನರುಚ್ಚರಿಸಿದ್ದಾರೆ.
ಮದ್ದೂರಿನಲ್ಲಿ ಮಾತನಾಡಿದ ಅವರು, ತಮಗೆ ಬಿಜೆಪಿ ಟಿಕೆಟ್ ಸಿಗುವುದೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಕಾದು ನೋಡಿ ಎಂದು ತಿಳಿಸಿದ್ದಾರೆ.
ಬಿಜೆಪಿ -ಜೆಡಿಎಸ್ ಮೈತ್ರಿ ಅನ್ವಯ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ ಎನ್ನುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಅಂತೆ ಕಂತೆಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ. ಮಂಡ್ಯ ಕ್ಷೇತ್ರ ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಸ್ಪರ್ಧಿಸುವ ಮಾತುಗಳು ಕೇವಲ ಊಹಾಪೋಹವಷ್ಟೇ. ಸಂಸದೆಯಾಗಿ ನನ್ನನ್ನು ಆಯ್ಕೆ ಮಾಡಿದ ಮಂಡ್ಯ ಜಿಲ್ಲೆಯ ಜನರನ್ನು ಬಿಟ್ಟು ಬೇರೆಡೆ ತೆರಳುವ ಮಾತೇ ಇಲ್ಲ. ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.