ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದ ಸಿಎಂ ಸಿದ್ದರಾಮಯ್ಯ ಅಮವಾಸ್ಯೆ ಸೂರ್ಯ ಎಂದಿದ್ದರು. ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ, ಸಿದ್ದರಾಮಯ್ಯ ತನ್ನನ್ನು ಏನೇ ಕರೆದರೂ ಆಶಿರ್ವಾದ ಎಂದುಕೊಳ್ಳುತ್ತೇನೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನ್ನನ್ನು ಅಮವಾಸ್ಯೆ ಅಥವಾ ಬೇರೆ ಯಾವುದೇ ಹೆಸರಿನಿಂದ ಕರೆಯಲಿ ಅದನ್ನು ಆಶಿರ್ವಾದ ಎಂದು ಸ್ವೀಕರಿಸುತ್ತೇನೆ. ನನ್ನ ತಂದೆ ಅಧಿಕಾರಿಯಾಗಿ ಸಿದ್ದರಾಮಯ್ಯ ಅವರ ಜೊತೆ ಕೆಲಸ ಮಾಡಿದ್ದಾರೆ. ಅವರೊಬ್ಬ ಒಳ್ಳೆಯ ಮುಖ್ಯಮಂತ್ರಿ ಮತ್ತು ವೈಯಕ್ತಿಕವಾಗಿ ಪ್ರಾಮಾಣಿಕರು ಅಂತ ಹೇಳಿದ್ದಾರೆ. ಸಿದ್ದರಾಮಯ್ಯನವರು ವಯಸ್ಸಿನಲ್ಲಿ ಬಹಳ ಹಿರಿಯರು. ನನ್ನ ತಾತನ ವಯಸ್ಸಿನವರು. ಹಾಗಾಗಿ ಅವರು ಯಾವ ಹೆಸರಿನಿಂದ ಕರೆದರೂ ಬೇಜಾರಿಲ್ಲ. ಅದನ್ನೆಲ್ಲ ಆಶಿರ್ವಾದ ಅಂತಾನೆ ಭಾವಿಸುತ್ತೇನೆ ಎಂದು ಹೇಳಿದ್ದಾರೆ.