
ಗ್ವಾಲಿಯರ್: ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ ಇಬ್ಬರು ವ್ಯಕ್ತಿಗಳು 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ತಮ್ಮ ನೀಚ ಕೃತ್ಯವನ್ನು ಸ್ನೇಹಿತರಿಗೆ ನೇರ ಪ್ರಸಾರ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಪ್ರಭಾರಿ ರಾಜೀವ್ ಗುಪ್ತಾ ತಿಳಿಸಿದ್ದು, ಆರೋಪಿಗಳ ಹೆಸರನ್ನು ಅವರು ಬಹಿರಂಗಪಡಿಸಿಲ್ಲ.
ಸುಮಾರು 21 ವರ್ಷ ವಯಸ್ಸಿನ ಇಬ್ಬರು ವ್ಯಕ್ತಿಗಳು ತನ್ನನ್ನು ಹೋಟೆಲ್ ಗೆ ಕರೆದೊಯ್ದು ಜೂನ್ 2 ರಂದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿ ಶುಕ್ರವಾರ ಪೊಲೀಸರನ್ನು ಸಂಪರ್ಕಿಸಿದ್ದಾಳೆ.
ದೂರುದಾರರ ಪ್ರಕಾರ, ಆರೋಪಿಗಳು ಈ ಕೃತ್ಯವನ್ನು ಸ್ನೇಹಿತರಿಗೆ ಲೈವ್-ಸ್ಟ್ರೀಮ್ ಮಾಡಿದರು, ಫೋಟೋಗಳು ಮತ್ತು ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ. ನಂತರ ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ಗುಪ್ತಾ ಹೇಳಿದರು.