ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದಲ್ಲಿರುವ ನಡುವೆಯೇ ಕಾಂಗ್ರೆಸ್ ನಾಯಕ ಹಾಗೂ ರಾಹುಲ್ ಗಾಂಧಿ, ಪ್ರಧಾನಿ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಮಿಸ್ಟರ್ 56ಗೆ ಚೀನಾ ಕಂಡರೆ ಭಯ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಲೇವಡಿ ಮಾಡಿದ್ದಾರೆ.
ವಿಡಿಯೋ ಸಮೇತ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಲಡಾಖ್ ಭಾಗದಲ್ಲಿ ಚೀನಾ ಆಕ್ರಮಣದ ಬಗ್ಗೆ ಮಾಧ್ಯಮಗಳ ವರದಿಯನ್ನು ಹಂಚಿಕೊಂಡಿದ್ದಾರೆ. ಮಾತ್ರವಲ್ಲದೇ ಮಿಸ್ಟರ್ 56 ಚೀನಾ ಕಂಡರೆ ಹೆದರುತ್ತಾರೆ ಎಂದು ಶೀರ್ಷಿಕೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕನ ಈ ಟ್ವೀಟ್ ಕೇಸರಿ ಪಾಳಯವನ್ನು ಕೆಣಕಿದೆ. ಹೀಗಾಗಿ ರಾಹುಲ್ ಗಾಂಧಿಯ ಟ್ವೀಟ್ಗೆ ಸಾಕಷ್ಟು ಬಿಜೆಪಿ ನಾಯಕರು ಕಟುವಾದ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಿದ ರಾಹುಲ್ ಗಾಂಧಿಗೆ ಬಿಜೆಪಿ ವಕ್ತಾರ ಆರ್.ಪಿ. ಸಿಂಗ್ ತರಾಟೆಗೆ ತೆಗೆದುಕೊಂಡಿದ್ದಾರೆ. ಅಂತಾರಾಷ್ಟ್ರೀಯ ರಾಜಕೀಯದ ಬಗ್ಗೆ ಯಾವುದೇ ಜ್ಞಾನವಿಲ್ಲದ ತರುಣ ರಾಹುಲ್ ಗಾಂಧಿ ಎಂದು ಪ್ರತಿಕ್ರಿಯಿಸಿದ್ದಾರೆ.