ಬೆಂಗಳೂರು : ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು. ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದೇಕೆ? ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯನ್ನು ಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು. ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದೇಕೆ? ವಿಜಯೇಂದ್ರ ಪಾದಯಾತ್ರೆ ಮಾಡುವ ಬದಲು, ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಜೆಡಿಎಸ್ ಕಾರಣವಾಗಿದ್ದರ ಬಗ್ಗೆಯೂ ಉತ್ತರ ನೀಡಬೇಕು.
ಚುನಾವಣೆಗೆ ಮೊದಲು 5 ಗ್ಯಾರಂಟಿ ಘೋಷಿಸಿದ್ದೆವು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರದಲ್ಲಿ ಬಡವರಿಗೆ ಮನೆಗಳನ್ನು ಕೊಟ್ಟಿದ್ದೇವೆ. ಆದರೆ ಬಿಜೆಪಿ ಅವಧಿಯಲ್ಲಿ ಬಡವರಿಗೆ ಒಂದೇ ಒಂದು ಮನೆಯನ್ನೂ ಕೊಟ್ಟಿಲ್ಲ. ಜೆಡಿಎಸ್-ಬಿಜೆಪಿ ಪಾದಯಾತ್ರೆಗೆ ಬಂದಾಗ ಜನರು ಈ ಬಗ್ಗೆ ಅವರನ್ನು ಪ್ರಶ್ನಿಸಬೇಕು. ಬಿಜೆಪಿ ಅವಧಿಯಲ್ಲಿ 21 ಹಗರಣಗಳು ನಡೆದಿವೆ. ಇವರ ಸಾಲು-ಸಾಲು ಭ್ರಷ್ಟಾಚಾರಗಳು ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅದನ್ನು ಸುಧಾರಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಹಿಸಲಾಗದೇ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮಾಡುತ್ತಿವೆ.
ನಾಲ್ಕು ವರ್ಷದ ಆಡಳಿತದಲ್ಲಿ ಅವರು ಮಾಡಿದ ಪಾಪಗಳನ್ನು ತೊಳೆದುಕೊಳ್ಳಲು ಬಿಜೆಪಿ-ಜೆಡಿಎಸ್ ಕೆಂಗೇರಿಯಿಂದ ಪಾದಯಾತ್ರೆ ಆರಂಭಿಸಿವೆ. ಒಂದಲ್ಲ, ಎರಡಲ್ಲ, ನೂರಾರು ಭ್ರಷ್ಟಾಚಾರಗಳನ್ನು ಮಾಡಿದ್ದಾರೆ. ತ್ವರಿತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆಯಾದರೆ ಇವರಲ್ಲಿ ಬಹಳಷ್ಟು ಜನರು ಜೈಲಿಗೆ ಹೋಗುತ್ತಾರೆ. ಇಂಥವರು ನಮ್ಮ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿರುವುದು ಎಷ್ಟು ಸರಿ ಎಂದು ಜನರು ಯೋಚಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.