ಬೆಂಗಳೂರು: ರಾಜ್ಯದ 14 ಜಿಲ್ಲಾ ಕೇಂದ್ರಗಳಲ್ಲಿ ಸೋಮವಾರದಿಂದ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಪರೀಕ್ಷೆ ಸ್ಥಗಿತಗೊಳಿಸಲಾಗಿದ್ದು, ರೋಗಿಗಳು ಪರದಾಡುವಂತಾಗಿದೆ.
14 ಜಿಲ್ಲಾ ಕೇಂದ್ರಗಳಲ್ಲಿ ವೈದ್ಯಕೀಯ ತಪಾಸಣೆ ಕಾರ್ಯ ನಿರ್ವಹಿಸುವ ಕೃಷ್ಣಾ ಡಯಾಗ್ನೋಸ್ಟಿಕ್ ಕಂಪನಿಗೆ ರಾಜ್ಯ ಸರ್ಕಾರ ಬಾಕಿ ಹಣ ಪಾವತಿಸದ ಕಾರಣ ನಿನ್ನೆಯಿಂದ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಪರೀಕ್ಷೆ ಸ್ಥಗಿತಗೊಳಿಸಲಾಗಿದೆ.
14 ಜಿಲ್ಲಾ ಕೇಂದ್ರಗಳಲ್ಲಿ ಕೃಷ್ಣಾ ಡಯಾಗ್ನೋಸ್ಟಿಕ್ ಕಂಪನಿಯವರು 2016 ರಿಂದ ಗುತ್ತಿಗೆ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಅನೇಕ ಆಸ್ಪತ್ರೆಗಳಲ್ಲಿ ಎಂಆರ್ಐ ಮತ್ತು ಸಿಟಿ ಸ್ಕ್ಯಾನ್ ಪರೀಕ್ಷೆ ಸ್ಥಗಿತಗೊಳಿಸಲಾಗಿದ್ದು, ರೋಗಿಗಳು ವಾಪಸ್ ತೆರಳುವಂತಾಗಿದೆ.
ಸರ್ಕಾರ ಕಂಪನಿಗೆ 40 ಕೋಟಿ ರೂಪಾಯಿ ಪಾವತಿಸಬೇಕಿದೆ. ಬಾಕಿ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಕಂಪನಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್ಐ ಮತ್ತು ಸಿಟಿ ಸ್ಕ್ಯಾನ್ ಪರೀಕ್ಷೆಗಳನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.