ಲಖ್ನೋ: ಬಿಜೆಪಿ ತನ್ನ 2017 ರ ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಿತ್ತು, ಅದನ್ನು ಸಾಧಿಸಲಾಗಿದೆಯೇ? ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.
ಉತ್ತರ ಪ್ರದೇಶದ ರೈತರಿಗೆ ಪ್ರತಿ ಬೆಳೆಗೆ ಎಂಎಸ್‌ಪಿ, ಉಚಿತ ನೀರಾವರಿ ಸೌಲಭ್ಯಗಳು, ಕಬ್ಬು ಬೆಳೆಗಾರರಿಗೆ 15 ದಿನಗಳಲ್ಲಿ ಬಾಕಿ ಪಾವತಿ, ಬಡ್ಡಿರಹಿತ ಸಾಲ ಮತ್ತು ವಿಮೆ ಮತ್ತು ಪಿಂಚಣಿ ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದ್ದಾರೆ.
ರದ್ದಾದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಆಂದೋಲನದ ಸಂದರ್ಭದಲ್ಲಿ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯಲಾಗುವುದು. ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಎಲ್ಲಾ ಭರವಸೆಗಳು ರಾಜ್ಯದ ವಿಧಾನಸಭಾ ಚುನಾವಣೆಯ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿರುತ್ತದೆ. 15 ದಿನಗಳಲ್ಲಿ ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿ ಮಾಡಲು ಅಗತ್ಯವಿದ್ದಲ್ಲಿ ವಿಶೇಷ ‘ರೈತ ಆವರ್ತ ನಿಧಿ’ ರಚಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ರೈತರ ಕಲ್ಯಾಣಕ್ಕಾಗಿ ತಮ್ಮ ದೃಢ ಸಂಕಲ್ಪವನ್ನು ವ್ಯಕ್ತಪಡಿಸಲು ಅನ್ನ ಸಂಕಲ್ಪ(ಆಹಾರ ಬದ್ಧತೆ) ಯೋಜನೆ ಜಾರಿ, ಪ್ರತಿಯೊಬ್ಬರಿಗೂ 300 ಯೂನಿಟ್ ವಿದ್ಯುತ್ ಒದಗಿಸಲಾಗುವುದು ಎಂದು ಹೇಳಿದ್ದಾರೆ.