alex Certify ಕೇಳಿದ ಖಾತೆ ಕೊಡದಿದ್ದಕ್ಕೆ ಕೆರಳಿದ ಸಚಿವರು, ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಳಿದ ಖಾತೆ ಕೊಡದಿದ್ದಕ್ಕೆ ಕೆರಳಿದ ಸಚಿವರು, ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಸಂಪುಟ ರಚನೆ, ಖಾತೆ ಹಂಚಿಕೆ ನಂತರ ಅಸಮಾಧಾನ ಉಂಟಾಗಿದ್ದು, ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ತಮಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಸಮಾಧಾನಿತ ಸಚಿವ ಆನಂದ್ ಸಿಂಗ್ ಜೊತೆಗೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಚಿವ ಆನಂದ್ ಸಿಂಗ್ ಅವರು ತಮ್ಮ ಭಾವನೆ ಹೇಳಿಕೊಂಡಿದ್ದಾರೆ. ಅವರ ಭಾವನೆ ಮತ್ತು ಮನವಿಯನ್ನು ಗೌರವಿಸುವುದಾಗಿ ಅವರಿಗೆ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ಹೇಳಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.ಇಂದು ಸಂಜೆ ಎಂಟಿಬಿ ನಾಗರಾಜ್ ಕೂಡ ಭೇಟಿಯಾಗಲಿದ್ದಾರೆ. ಅವರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಭೇಟಿಯಾಗಿ ಅವರು ಏನು ಹೇಳುತ್ತಾರೆ ಎಂಬುದನ್ನು ನೋಡಿಕೊಂಡು ಮುಂದಿನ ತೀರ್ಮಾನ ಹೇಳುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ನನಗೆ ಯಾವ ಖಾತೆ ಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಗೊತ್ತಿದೆ. ವಸತಿ ಖಾತೆಯನ್ನು ಕೇಳಿದ್ದೆ. ವಸತಿ ಖಾತೆ ಕೊಡಲು ಆಗದಿದ್ದರೆ ಜನಪರ ಖಾತೆ ಕೊಡುವಂತೆ ಮನವಿ ಮಾಡಿದ್ದೆ. ಸರ್ಕಾರ ಮತ್ತು ಜನರಿಗೆ ಸೇವೆ ಮಾಡುವಂತಹ ಖಾತೆ ನೀಡಲಿ ಎಂದು ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...