ಬೆಳಗಾವಿ(ಸುವರ್ಣಸೌಧ): ಇ- ಸ್ವತ್ತು ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವುದಾಗಿ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಇ- ಸ್ವತ್ತು ವಹಿವಾಟು ಹೆಚ್ಚಳವಾದ ಹಿನ್ನೆಲೆಯಲ್ಲಿ ಸರ್ವರ್ ಸಮಸ್ಯೆ ಬಲಪಡಿಸಿ ಸ್ಟೋರೇಜ್ ಸಾಮರ್ಥ್ಯ ಹೆಚ್ಚಿಸಲು 65 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಿದ್ಧಪಡಿಸಿ ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಬಹುತೇಕ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿವೇಶನ ಕಟ್ಟಡಗಳ ಆಸ್ತಿ ಹಕ್ಕಿಗೆ ಸಂಬಂಧಿಸಿದ ಇ- ಖಾತಾ ಸರ್ವರ್ ಸ್ಥಗಿತಗೊಂಡು ಸಮಸ್ಯೆಯಾಗಿದ್ದು, ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.