ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ನಿಂದ ಜಲ ಮಿಷನ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಮನೆಮನೆಗೆ ನಲ್ಲಿಗಳ ಮೂಲಕ ನೀರು ಪೂರೈಸುವ ಕೇಂದ್ರ ಸರ್ಕಾರದ ಜಲಮಿಷನ್ ಯೋಜನೆಯನ್ನು ಕೇಂದ್ರ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪ್ರತಿ ಮನೆಗೆ ನಲ್ಲಿ ಮೂಲಕ ನೀರು ಪೂರೈಸುವ ಈ ಯೋಜನೆ ಹಂತ ಹಂತವಾಗಿ ಜಾರಿಯಾಗಲಿದೆ. ಏಪ್ರಿಲ್ ನಿಂದ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.