ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿತಗೊಂಡಿರುವ ಘಟನೆ ಟ್ಯಾನರಿ ರಸ್ತೆಯಲ್ಲಿ ಸಂಭವಿಸಿದೆ.
ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಸುರಂಗ ಕೊರೆಯಲಾಗಿತ್ತು. ಸುರಂಗ ಕೊರೆದ ಬಳಿಕ ಒತ್ತಡದಿಂದಾಗಿ ಇದೀಗ 30 ಅಡಿ ಮಣ್ಣು ಕುಸಿತಗೊಂಡಿದೆ.
ಝುಬಿ ಎಂಬುವವರಿಗೆ ಸೇರಿದ ಜಾಗದಲ್ಲಿ ಈ ಘಟನೆ ನಡೆದಿದ್ದು, ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿತಗೊಂಡಿದೆ ಎಂದು ತಿಳಿದುಬಂದಿದೆ. ಮಣ್ಣು ಕುಸಿತಕ್ಕೆ ಬಿಎಂಆರ್ಸಿಎಲ್ ಕಾರಣ ಎಂದು ಮಾಲೀಕರು ಆರೋಪಿಸಿದ್ದಾರೆ.