ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ವಿವಾದದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ.
ಬಿಡಿಎ ಮಾದರಿಯಲ್ಲಿ ಮುಡಾಗೆ ಪ್ರತ್ಯೇಕ ಕಾಯ್ದೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಮುಂದಿನ ವಾರ ಅಧಿವೇಶನದಲ್ಲಿ ಬಿಲ್ ಮಂಡಿಸಲಾಗುವುದು.
ನಗರಾಭಿವೃದ್ಧಿ ಪ್ರಾಧಿಕಾರದ ಅಧೀನದಲ್ಲಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 1987ರ ಕಾಯ್ದೆ ಯನ್ವಯ ಕಾರ್ಯ ನಿರ್ವಹಿಸುತ್ತಿತ್ತು. ಈಗ ಬಿಡಿಎ ಮಾದರಿಯಲ್ಲಿ ಮುಡಾಗೆ ಪ್ರತ್ಯೇಕ ಕಾಯ್ದೆ ತರಲಾಗುವುದು. ಹೊಸ ಕಾಯ್ದೆಯಂತೆ ಭೂಸ್ವಾಧೀನ, ನಿವೇಶನ ಹಂಚಿಕೆ, ನಕ್ಷೆ ಮಂಜೂರಾತಿ ನೀಡಲಾಗುವುದು ಎಂದು ಹೇಳಲಾಗಿದೆ.