
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 24ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಏಕಸದಸ್ಯ ಪೀಠ ಮಾನ್ಯ ಮಾಡಿದ್ದು, ಈ ಆದೇಶ ರದ್ದುಪಡಿಸಬೇಕೆಂದು ವಿಭಾಗೀಯ ಪೀಠಕ್ಕೆ ಸಿಎಂ ಮನವಿ ಮಾಡಿದ್ದಾರೆ.