alex Certify BREAKING: ಮುಡಾ ಕೇಸ್ ವಿಚಾರಣೆಗೆ ಹಾಜರಾಗುತ್ತೇನೆ: ಲೋಕಾಯುಕ್ತ ನೋಟಿಸ್ ಬಗ್ಗೆ ಸಿಎಂ ಮೊದಲ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮುಡಾ ಕೇಸ್ ವಿಚಾರಣೆಗೆ ಹಾಜರಾಗುತ್ತೇನೆ: ಲೋಕಾಯುಕ್ತ ನೋಟಿಸ್ ಬಗ್ಗೆ ಸಿಎಂ ಮೊದಲ ಪ್ರತಿಕ್ರಿಯೆ

ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರುಳಿಕುಪ್ಪಿಯಲ್ಲಿ ಲೋಕಾಯುಕ್ತ ನೋಟಿಸ್ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ನೋಟಿಸ್ ನೀಡಲಾಗಿದೆ.

ಮುಡಾ ಹಗರಣ ಸಂಬಂಧ ಈಗಾಗಲೇ ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನಯ್ಯ ಹಾಗೂ ಎ4 ಆರೋಪಿ ಸೇರಿದಂತೆ ಹಲವರ ವಿಚಾರಣೆ ಮುಗಿದಿದ್ದು, ಎ1 ಆರೋಪಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಮಾತ್ರ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಿಎಂ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...