
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಂ ಕುಟುಂಬದ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಮೇಲ್ಮನವಿ ಸಲ್ಲಿಸಲಾಗಿದೆ.
ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.
ಸಿಬಿಐ ತನಿಖೆ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾ ಮಾಡಿದ್ದು, ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.