
ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ವಿಚಾರಣೆ ವೇಳೆ ಮುಡಾ ಮಾಜಿ ಅಧ್ಯಕ್ಷ ಮರಿಗೌಡ ಆಪ್ತ ಶಿವಣ್ಣನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ವಿಲ್ಸನ್ ಗಾರ್ಡನ್ ಸ್ಥಳೀಯ ಆಸ್ಪತ್ರೆಗೆ ಇಡಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ.
ಮುಡಾ ಹಗರಣದ ತನಿಖೆಗೆ ಸಂಬಂಧಪಟ್ಟಂತೆ ಇಂದು ಇಡಿ ವಿಚಾರಣೆಗೆ ಶಿವಣ್ಣ ಹಾಜರಾಗಿದ್ದರು. ಶಾಂತಿನಗರದ ಇಡಿ ಕಚೇರಿಯಲ್ಲಿ ಬೆಳಗ್ಗೆಯಿಂದ ವಿಚಾರಣೆ ನಡೆದಿದ್ದು, ಹಲವು ಗಂಟೆಗಳ ವಿಚಾರಣೆಯ ನಂತರ ಎದೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.