
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಹಾಗೂ ಎಇಇ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೂಡಲೇ ಜಾರಿಗೆ ಬರುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮೌಖಿಕ ಆದೇಶ ಹೊರಡಿಸಿದ್ದಾರೆ.
50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಸಂಬಂಧ ತನಿಖೆಗೆ ಸಚಿವರು ಆದೇಶಿಸಿದ್ದಾರೆ. ಐಎಎಸ್ ಅಧಿಕಾರಿಗಳಾದ ವೆಂಕಟಚಲಪತಿ, ಕವಳಗಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತನಿಖೆ ನಡೆಸಿ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸಚಿವ ಭೈರತಿ ಸುರೇಶ್ ಆದೇಶಿಸಿದ್ದಾರೆ.