ಬೆಂಗಳೂರು: ಮುಡಾ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ದೋಸ್ತಿ ನಾಯಕರ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪಾದಯಾತ್ರೆಗೆ ಅನುಮತಿ ನೀಡಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಪಾದಯಾತ್ರೆಗೆ ನಾವು ಅವಕಾಶ ಕೊಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ. ನಮ್ಮ ತಕರಾರಿಲ್ಲ. ಆದರೆ ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.