
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು ದಾಖಲಿಸಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಮುಡಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್ ಹಾಗೂ ಹಿಂದಿನ ಲೋಕಾಯುಕ್ತ ಸಜಿತ್ ವಿರುದ್ಧ ದೂರು ದಾಖಲಿಸಿದ್ದಾರೆ.
ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ.