ಬೆಂಗಳೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 12 ರಂದು ಮೈಸೂರಿನಲ್ಲಿ ‘ಬಿಜೆಪಿ’ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಮುಡಾ’ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ. ತನಿಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಹಸ್ತಕ್ಷೇಪ ಇರದಂತೆ ಸಿಬಿಐಗೆ ವಹಿಸಬೇಕು. ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ.