ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ನಿರಾಕರಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಕಾರಣಕ್ಕೆ ಸಿಬಿಐಗೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಕಾರಣಕ್ಕೆ ಸಿಬಿಐ ತನಿಖೆಗೆ ನೀಡಬೇಕು? ಲೋಕಾಯುಕ್ತ ತನಿಖೆ ನಡೆಯುತ್ತಿರುವಾಗ, ಇಡಿ ಕೂಡ ತನಿಖೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಮೂರನೇ ಸಂಸ್ಥೆ ತನಿಖೆ ಮಾಡಲು ಯಾಕೆ ನೀಡುತ್ತಾರೆ? ಈ ರೀತಿ ನೀಡಲು ಅವಕಾಶ ಇಲ್ಲ. ಈ ಬಗ್ಗೆ ಅನೇಕ ನ್ಯಾಯಾಲಯದ ತೀರ್ಪುಗಳಿವೆ ಎಂದರು.
ನನ್ನ ವಿರುದ್ಧವೂ ಇದೇ ರೀತಿ ಕೇಸ್ ದಾಖಲಿಸಿರುವುದರ ವಿರುದ್ಧ ನಾನು ಬಡಿದಾಡುತ್ತಿದ್ದೇನೆ. ಇದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇನೆ ಎಂದು ತಿಳಿಸಿದರು.