ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ದೀಪಾ ಚೋಳನ್ ಜಾರಿ ನಿರ್ದೇಶನಾಲಯ-ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ದೀಪಾ ಚೋಳನ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನಿನ್ನೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ದೀಪಾ ಚೋಳನ್ ಇಂದು ಬೆಂಗಳೂರಿನ ಶಾಂತಿನಗರ ಇಡಿ ಕಚೇರಿಗೆ ಹಾಜರಾಗಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿದಂತೆ ದಾಖಲೆಗಳನ್ನು ತಿದ್ದಿದ ಆರೋಪ ದೀಪಾವರ ಮೇಲೆ ಇದ್ದು, ಹಿನ್ನೆಲೆಯಲ್ಲಿ ದಾಖಲೆಗಳ ಸಮೇತ ದೀಪಾ, ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.