
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ-ಇಡಿ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಮುಡಾ ಮಾಜಿ ಆಯುಕ್ತ ಡಾ.ಡಿ.ಬಿ.ನಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಡಿ.ಬಿ.ನಟೇಶ್ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧ ಇಡಿ ತನಿಖೆ ನಡೆಸಬಹುದು ಶೋಧನೆ ವೇಳೆ ಸಿಕ್ಕ ದಾಖಲೆ ಆಧರಿಸಿಯೂ ತನಿಖೆ ನಡೆಸಬಹುದು ಎಂದು ತಿಳಿಸಿದೆ.
ಇದೇ ವೇಳೆ ಡಿ.ಬಿ.ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿದೆ.