ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಎಫ್ ಐ ಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ಕೋರ್ಟ್ ಸೂಚನೆ ನೀಡಿದೆ. ಇಂದೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸುವ ಸಾಧ್ಯತೆಯಿದೆ.
ಒಂದು ವೇಳೆ ಎಫ್ ಐ ಆರ್ ದಾಖಲಾದ್ರೆ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಎ 2 ಆರೋಪಿಗಳಾಗಲಿದ್ದಾರೆ. ಈ ಕುರಿತಂತೆ ಸ್ನೇಹಮಯಿ ಕೃಷ್ಣ ಅವರು ಈಗಾಗಲೇ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಸ್ನೇಹಮಯಿ ಕೃಷ್ಣ ದೂರಿನ ಮೇರಗೆ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ವಿರುದ್ಧ ದೂರು ದಾಖಲಿಸಲು ಸಿದ್ದತೆ ನಡೆಸಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ.ಡಿಸೆಂಬರ್ 24 ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಮೈಸೂರು ಲೋಕಾಯುಕ್ತ ಎಸ್ ಪಿಗೆ ಸೂಚನೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.