ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ತನಿಖೆಯನ್ನು ಚುರುಕುಗೊಳಿಸಿದೆ. ಮುಡಾ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಮಾಜಿ ಆಯುಕ್ತರು, ಬಿಲ್ಡರ್ ಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮುಂದುವರೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ನಾಪತ್ತೆಯಾಗಿದ್ದಾರೆ.
ನಿನ್ನೆ ಮೂಡಾ ಮಾಜಿ ಆಯುಕ್ತ ಡಾ.ನಟೇಶ್, ದಿನೇಶ್ ಕುಮಾರ್, ಬಿಲ್ಡರ್ ಮಂಜುನಾಥ್ ಅವರ ಬೆಂಗಳೂರಿನ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ದಿನೇಶ್ ಕುಮಾರ್ ವಾಕಿಂಗ್ ಗೆ ಹೋಗಿದ್ದರು. ಹೀಗೆ ಹೋದವರೇ ಇಡಿ ಕಣ್ತಪ್ಪಿಸಿ ನಾಪತ್ತೆಯಾಗಿದ್ದಾರೆ.
ಇಡಿಯಿಂದ ಬಂಧನ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ದಿನೇಶ್ ಕುಮಾರ್ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇನ್ನೊಂದೆಡೆ ಇಡಿ ಅಧಿಕಾರಿಗಳು ಇಂದು ದಿನೇಶ್ ಕುಮಾರ್ ಅವರ ಮನೆಗೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಿದ್ದಾರೆ. ಅವರ ಕುಟುಂಬದವರಿಗೂ ದಿನೇಶ್ ಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸುವಂತೆ ಸೂಚಿಸಿದ್ದಾರೆ.
ಒಂದು ವೇಳೆ ದಿನೇಶ್ ಕುಮಾರ್ ವಿಚಾರಣೆಗೆ ಹಾಜರಾದರೆ ವಾರೆಂಟ್ ಪಡೆದು ಅವರನ್ನು ಇಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.