ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ಮುಡಾ ಹರಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಸ್ನೇಹಮಯಿ ಕೃಷ್ಣ ಹಾಗೂ ಸಿಎಂ ಸಿದ್ದರಾಮಯ್ಯ ಇಬ್ಬರ ಪರ ವಕೀಲರ ವಾದ-ಪ್ರತಿವಾದವನ್ನು ಆಲಿಸಿದ್ದು, ಎರಡೂ ಕಡೆಯ ವಾದ ಮಂದನೆ ಅಂತ್ಯವಾಗಿದೆ.
ಬಳಿಕ ಅರ್ಜಿ ವಿಚಾರಣೆ ಕುರಿತ ಆದೇಶವನ್ನು ಹೈಕೋರ್ಟ್ ಏಕಸದಸ್ಯಪೀಠ ಕಾಯ್ದಿರಿಸಿದೆ. ಅಲ್ಲದೇ ಲೋಕಾಯುಕ್ತ ಪೊಲೀಸರಿಗೆ ಅಂತಿಮ ವರದಿ ಸಲ್ಲಿಸಲು ನೀಡಿದ ಅವಧಿಯನ್ನು ಆದೇಶ ನೀಡುವವರೆಗೂ ಗಡುವು ವಿಸ್ತರಣೆ ಮಾಡಿದೆ.