ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಲೋಕಾಯುಕ್ತ, ವರದಿ ಸಿದ್ಧಗೊಳಿಸಿದ್ದು, ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗಿದೆ. ಮುಡ ಅಹಗರಣದಲ್ಲಿ ಸಿಎಂ ಪಾತ್ರವಿಲ್ಲ. ಡಿನೋಟಿಫೈ, ಭೂಪರಿವರ್ತನೆ ಮಡುವಾಗ ಅಧಿಕರಿಗಳೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ಮುಡಾ ಆಯುಕ್ತರು, ರೆವೆನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎನ್ನಲಾಗಿದೆ. ಸೋಮವಾರ ಲೋಕಾಯುಕ್ತ ವರದಿ ಕೋರ್ಟ್ ಗೆ ಸಲ್ಲಿಕೆಯಾಗಲಿದೆ.
ಲೋಕಾಯುಕ್ತದಿಂದ ಕ್ಲೀನ್ ಚಿಟ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಕ್ಲೀನ್ ಚಿಟ್ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.