ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಚ್ ವಾರೆಂಟ್ ನೀಡಲು ಲೋಕಾಯುಕ್ತ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಜೊತೆಗೆ ಸರ್ಚ್ ವಾರೆಂಟ್ ನೀಡಿ ವಾಪಾಸ್ ಪಡೆಯಲಾಗಿದೆ ಎಂದು ಆರೋಪಿಸಿ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್ ಟಿಐ ಕಾರ್ಯಕರ್ತ ಗಂಗರಾಜು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು, ಸಚಿವ ಬೈರತಿ ಸುರೇಶ್, ವಿಶೇಷ ಕಾರ್ತವ್ಯಾಧಿಕಾರಿ ಮಾರುತಿ ಬಗಲಿ, ಹಿಂದಿನ ಮುಡಾ ಆಯುಕ್ತರಾದ ನಟೇಶ್, ದಿನೇಶ್ ವಿರುದ್ಧ ರಾಜ್ಯಪಾಲರಿಗೆ ಇ-ಮೇಲ್ ಹಾಗೂ ಅಂಚೆ ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ.
ಕೆಲ ಅಧಿಕಾರಿಗಳಿಂದಲೂ ಸರ್ಕಾರಕ್ಕೆ ಮಾಹಿತಿಗಳು ಸೋರಿಕೆಯಾಗಿವೆ. ಈ ಮೂಲಕ ಬೈರತಿ ಸುರೇಶ್ ಕಡತಗಳನ್ನು ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಇದರಲ್ಲಿ ಕೆಲ ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ಗಂಗರಾಜು ಆರೋಪಿಸಿದ್ದಾರೆ.