
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖಾ ವರದಿಗೆ ದೂರುದಾರ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಮೂಡಾ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ, ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಆರು ಜನರಿಗೆ ಕ್ಲೀನ್ ಚಿಟ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ವಿರುದ್ಧ ಸೂಕ್ತ ಸಾಕ್ಷಾಧಾರಗಳಿಲ್ಲದ ಕಾರಣ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಮಾಡಿತ್ತು. ಇದೀಗ ಲೋಕಾಯುಕ್ತ ವರದಿಗೆ ದೂರುದಾರ ಸ್ನೇಹಮಯಿ ಕೃಷ ತಕರಾರು ಸಲ್ಲಿಸಿದ್ದಾರೆ.
ಬೆಂಗಳುರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಲೋಕಾಯುಕ್ತ ವರದಿ ವಿರುದ್ಧ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದು, 39 ಪುಟಗಳ ಅಕರಾರು ಅರ್ಜಿಯಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅದರಲ್ಲಿನ ಅಂಶಗಳನ್ನು ಪರಿಗಣಿಸಿ ಸೂಕ್ತ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.