alex Certify ಮುಡಾ ಹಗರಣ: ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ; ಸರ್ಚ್ ವಾರೆಂಟ್ ಜಾರಿ ಮಾಡದ್ದನ್ನು ಸಚಿವರಿಗೆ ತಿಳಿಸಲಾಗಿದೆ: ಸ್ನೇಹಮಯಿ ಕೃಷ್ಣ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಡಾ ಹಗರಣ: ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ; ಸರ್ಚ್ ವಾರೆಂಟ್ ಜಾರಿ ಮಾಡದ್ದನ್ನು ಸಚಿವರಿಗೆ ತಿಳಿಸಲಾಗಿದೆ: ಸ್ನೇಹಮಯಿ ಕೃಷ್ಣ ಆರೋಪ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ ಎಂದು ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಜೂನ್ 28ರಂದು ಲೋಕಾಯುಕ್ತ ಕಚೇರಿ ಮೇಲೆ ದಾಳಿ ನಡೆಸಲು ಸರ್ಚ್ ವಾರೆಂಟ್ ಜಾರಿಯಾಗಿದ್ದರೂ ಡಿವೈಎಸ್ ಪಿ ಮಾಲತೇಶ್ ಎಸ್ ಕೆ ಆದೇಶವನ್ನು ಪಾಲಿಸಿಲ್ಲ. ದಾಳಿಗೆ ಮೊದಲೇ ವಿಷಯವನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ತಿಳಿಸಲಾಗಿದೆ. ಅವರು ಚಾಪರ್ ನಲ್ಲಿ ಬಂದು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...