alex Certify BREAKING NEWS: ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಕೆಲವೇ ಕ್ಷಣಗಳಲ್ಲಿ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಕೆಲವೇ ಕ್ಷಣಗಳಲ್ಲಿ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಖಾಸಗಿ ಕಾರಿನಲ್ಲಿ ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಕೆಲವೇ ಕ್ಷಣಗಳಲ್ಲಿ ಮೈಸೂರು ಲೋಕಾಯುಕ್ತ ಕಚೇರಿಗೆ ತೆರಳಲಿದ್ದು, ವಿಚಾರಣೆಗೆ ಹಾಜರಾಗಲಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...