ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯಲಿದೆ.
ಲೋಕಾಯುಕ್ತ ಕಚೇರಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವಿಚಾರಣೆ ಹಿನ್ನೆಲೆಯಲ್ಲಿ ಕಚೇರಿ ಸುತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ದೇವರಾಜ್ ಠಾಣೆಗೆ ಭೇಟಿ ನೀಡಿ ಸಭೆ ನಡೆಸಿದ್ದಾರೆ. ಮೈಸೂರು ನಗರದಲ್ಲಿ ಕಟ್ಟೆಚ್ಚರವಹಿಸುವಂತೆ ಸೂಚಿಸಿದ್ದಾರೆ.
ಇನ್ನೊಂದೆಡೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಕೂದ ನಡೆಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಮೈಸೂರು ಲೋಕಾಯುಕ್ತ ಕಚೇರಿ ಬಳಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.