BIG NEWS: ಮುಡಾ ಹಗರಣ: ಮತ್ತೊಂದು ಗಂಭೀರ ಆರೋಪ ಮಾಡಿದ ದೂರುದಾರ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಹೋರಾಟ ನಿಲ್ಲಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪಾರ್ವತಿ ಹಾಗೂ ಆಪ್ತರು ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಎಲ್ಲಿಯೂ ಕಾಣಿಸಿಕೊಳ್ಳದ ಸ್ನೇಹಮಯಿ ಕೃಷ್ಣ ಇದೀಗ ಮತ್ತೆ ಪ್ರತ್ಯಕ್ಷರಾಗಿದ್ದು, ಹೋರಾಟ ಹತ್ತಿಕ್ಕಲು ನನ್ನ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದಿದ್ದಾರೆ.

ಮೂಡಾ ಹಗರಣದ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ. ಹೋರಾಟ ನಿಲ್ಲಿಸಲು ನನಗೆ ಆಮಿಷವೊಡ್ಡಿದ್ದರು. ನಾನು ಯಾವುದಕ್ಕೂ ಒಪ್ಪಿಲ್ಲ. ಆ ಕಾರಣಕ್ಕೆ ನನ್ನ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಲೋಕಾಯುಕ್ತ ತನಿಖೆಯಾಗಲಿ, ಸಿಬಿಐಗೆ ಬೇಡ ಎಂದು ನನಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದರು.

ಇನ್ನು ಹರ್ಷ ಹಾಗೂ ಶ್ರೀನಿಧಿ ಎಂಬ ಇಬ್ಬರು ಹಣದ ಆಮಿಷವೊಡ್ಡಿದ್ದಾರೆ ಎನ್ನಲಾಗಿದೆ. ಸಿಎಂ ಪತ್ನಿ ಪಾರ್ವತಿ ಆಪ್ತಸಹಾಯಕ ಎಂದು ಹೇಳಿಕೊಂಡು ಡಿ.13ರಂದು ಮುಡಾ ಬಳಿ ಸ್ನೇಹಮಯಿ ಕೃಷ್ನ ರನ್ನು ಭೇಟಿ ಮಾಡಿದ್ದರು. ಪಾರ್ವತಮ್ಮ ಮಾನಸಿಕವಾಗಿ ನೊಂದಿದ್ದಾರೆ. ಪ್ರಕರಣ ಸಿಬಿಐಗೆ ಕೊಡಿ ಎಂಬ ಅರ್ಜಿ ವಾಪಾಸ್ ಪಡೆಯಿರಿ. ಲೋಕಾಯುಕ್ತದಿಂದ ನಮಗೇನೂ ಸಮಸ್ಯೆಯಿಲ್ಲ. ನಿಮಗೆ ಕೇಳಿದಷ್ಟು ಹಣ ಕೊಡುತ್ತೇವೆ ಎಂದು ಹರ್ಷ ಎಂಬಾತ ಹೇಳಿದ್ದಾನೆ ಎನ್ನಲಗಿದೆ. ಆದರೆ ಸ್ನೇಹಮಯಿ ಕೃಷ್ಣ ಇದನ್ನು ನಿರಾಕರಿಸಿದ್ದಾರೆ. ಆದರೆ ಸಿಬಿಐ ತನಿಖೆ ಬೇಡ ಎಂದು ಆಮಿಷವೊಡ್ಡಿದ್ದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ತಿಳಿಸಿದ್ದಾರೆ. ಆಮಿಷವೊಡ್ದಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖ ಮಾಡುವುದಾಗಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read