ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧವೇ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ವಿರುದ್ಧ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿ, ಸದ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಈ ನಡುವೆ ಸ್ನೇಹಮಯಿ ಕೃಷ್ಣ ವಿರುದ್ಧವೇ ಕಾಂಗ್ರೆಸ್ ಲೋಕಾಯುಕ್ತಕ್ಕೆ ದೂರು ನೀಡಿದೆ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ಮೇಲೆ ಲಕ್ಷ್ಮಣ್ ಒತ್ತಡ ಹಾಕಿತ್ತಿರುವುದಾಗಿ ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ನನಗೂ ಲೋಕಾಯುಕ್ತ ಅಧಿಕಾರಿಗಳಿಗೂ ಯಾವುದೇ ಸಂಬಂಧವಿಲ್ಲ. ಆದಾಗ್ಯೂ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ಸ್ನೇಹಮಯಿ ಕೃಷ್ಣ ಅವರ ವಿರುದ್ಧವೇ ಅನೇಕ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಲೋಕಾಯುಕ್ಕೆ ದೂರು ನೀಡಿದ್ದಾಗಿ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.