BIG NEWS: ಮುಡಾ ಹಗರಣ: ನಿವೇಶನದ ವಿಚಾರವಾಗಿ ಮಹತ್ವದ ಹೇಳಿಕೆ ನೀಡಿದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ, ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಮುಡಾ ಸೈಟ್ ವಿಚಾರವಾಗಿ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ತನಿಖೆ ನಡೆದು ವರದಿ ಬರುವವರೆಗೂ ಮುಡಾದ ನಿವೇಶನಗಳು ನಮ್ಮದಲ್ಲ ಎಂದು ತಿಳಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಯಾಗುತ್ತಿದೆ. ಈಗಾಗಲೇ ಮುಡಾ ಸೈಟ್ ವಾಪಾಸ್ ಕೊಡುವ ಬಗ್ಗೆ ಹೇಳಲಾಗಿದೆ. 2005ರಿಂದ ಯಾರಿಗೆಲ್ಲ ಮುಡಾ ಸೈಟ್ ನೀಡಲಾಗಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅದರ ಅರ್ಥ ನಮಗೆ ಕೊಟ್ಟ ನಿವೇಶನವೂ ರದ್ದಾಗಿದೆ. ಈಗ ಆ ನಿವೇಶನಗಳು ನಮ್ಮ ಸುಪರ್ದಿಗೆ ಬರುವುದಿಲ್ಲ. ನ್ಯಾಯಾಂಗ ತನಿಖೆ ನಡೆದು ವರದಿ ಬರುವವರೆಗೂ ನಿವೇಶನ ನಮ್ಮದಲ್ಲ. ತನಿಖೆ ನಡೆಸಿ ನಿವೇಶನ ನಮ್ಮದು ಎಂದರೆ ನಮಗೆ ಕೊಡುತ್ತಾರೆ. ಇಲ್ಲದಿದ್ದರೆ ಕುಟುಂಬದವರು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ತಂದೆ ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಬಿಂಬಿಸುವುದು ಸರಿಯಲ್ಲ. ವಿಪಕ್ಷಗಳ ಹೋರಾಟ ಸೂಕ್ತವಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read