ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸದನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಲು ಮುಂದಾಗಿವೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಮುಡಾ ಅಕ್ರಮದ ಬಗ್ಗೆ ವಿಧಾನಸಭೆ, ಪರಿಷತ್ ಕಲಾಪದಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಹಾಗಾಗಿ ಇಂದಿನಿಂದ ನಾವು ಸದನದಲ್ಲಿಯೆ ಧರಣಿ ನಡೆಸುತ್ತೇವೆ ಎಂದರು.
ಇಂದಿನಿಂದ ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸುತ್ತೇವೆ. ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು.