ನವದೆಹಲಿ: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಲು ಮುಂದಾಗಿರುವ ಪಾದಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಅಂದುಕೊಂಡಂತೆಯೇ ನಡೆಯಲಿದೆ ಎಂದರು.
ಪಾದಯಾತ್ರೆಗೆ ಜೆಡಿಎಸ್ ಅಸಮಾಧಾನ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡುತ್ತೇವೆ. ಪಾದಯಾತ್ರೆ ನಿಲ್ಲಲ್ಲ. ಜೆಡಿಎಸ್ ನವರನ್ನೂ ಮನವೊಲಿಸಲಾಗುವುದು ಎಂದು ಹೇಳಿದರು. ಇನ್ನು ಬಿಜೆಪಿ ಶಾಸಕ ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆಯೂ ಮಾತುಕತೆ ನಡೆಸಲಾಗುವುದು.