ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಅಧಿಕೃತ ತನಿಖೆ ಆರಂಭವಾಗಲಿದೆ.
ಲೋಕಾಯುಕ್ತ ತನಿಖೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಇಡಿ ತನಿಖೆ ಆತಂಕವೂ ಶುರುವಾಗಿದೆ. ಒಟ್ಟಾರೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗಿದೆ.
ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ನಾಲ್ಕು ತಂಡಗಳಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಯಲಿದೆ. ಈಗಗಾಲೇ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಮುಡಾಗೆ ಸಂಬಂಧಿಸಿದ 1998ರಿಂದ 2023ರವರೆಗಿನ ಸಂಪೂರ್ಣ ಕಡತಗಳನ್ನು ಪಡೆಯಲಿರುವ ಲೋಕಾಯುಕ್ತ ಪೊಲೀಸರು, ರೆವೆನ್ಯೂ ಎಕ್ಸ್ ಪರ್ಟ್ ಗಳ ಮೂಲಕ ಮುಡಾ ಕಡತಗಳ ಪರಿಶೀಲನೆ ನಡೆಸಲಿದ್ದಾರೆ.
ಜಮೀನು ಮೂಲ ಮಾಲೀಕರಿಗೂ ನೊಟೀಸ್ ನೀಡಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ. ಎಲ್ಲಾ ಆರೋಪಿಗಳಿಗೂ ನೊಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಿದ್ದಾರೆ.