alex Certify ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ತುಮಕೂರು ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ,

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸ್ಪರ್ಧಿಸಿದ್ದರು. ಹಾಲಿ ಸಂಸದರಾಗಿದ್ದರೂ ಮುದ್ದಹನುಮೇಗೌಡರಿಗೆ ಟಿಕೆಟ್ ಕೈತಪ್ಪಿತ್ತು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುಣಿಗಲ್ ನಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದ ಅವರು ಟಿಕೆಟ್ ಸಿಗದ ಕಾರಣ ಬಿಜೆಪಿ ಸೇರ್ಪಡೆಯಾಗಿದ್ದರು. ಬಿಜೆಪಿಯಲ್ಲಿಯೂ ಟಿಕೆಟ್ ಸಿಕ್ಕಿರಲಿಲ್ಲ. ಈಗ ಕಾಂಗ್ರೆಸ್ ಸೇರಿ ತುಮಕೂರಿನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...