alex Certify BREAKING : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Mysore Dasara 2024 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Mysore Dasara 2024

ಬೆಂಗಳೂರು : ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಮೈಸೂರಿನಲ್ಲಿಅ.3 ರಿಂದ 12 ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಅ.12 ರಂದು ಜಂಬೂ ಸವಾರಿ ನಡೆಯಲಿದೆ.

ಹೌದು, ಈ ಬಾರಿ ಅದ್ದೂರಿಯಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಕ್ಟೋಬರ್ 3 ರಿಂದ 12 ರವರೆಗೆ ದಸರಾ ಮಹೋತ್ಸವ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅ.3 ರಿಂದ 12 ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಅಕ್ಟೋಬರ್ 3 ರಂದು ಬೆಳಗ್ಗೆ 9 ಗಂಟೆ 10 ನಿಮಿಷಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ನೆರವೇರಿಸಿ ನಂತರ ದಸರಾ ಉದ್ಘಾಟನೆ ಮಾಡಲಾಗುತ್ತಿದೆ. ಅ.12 ರ ಮಧ್ಯಾಹ್ನ 12 :10 ಕ್ಕೆ ಜಂಬೂ ಸವಾರಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ದಸರಾ ಉದ್ಘಾಟಕರ ಹೆಸರು ಅಂತಿಮವಾಗಿಲ್ಲ. ಮುಂದೆ ಚರ್ಚೆ ನಡೆಸಿ ಯಾರು ದಸರಾ ಉದ್ಘಾಟಿಸಬೇಕೆಂದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...