ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗೆ ನೇರವಾಗಿ ತಸ್ತಿಕ್ ಹಣ ಪಾವತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಸಿ ದರ್ಜೆ ದೇವಸ್ಥಾನಗಳ ಅರ್ಚಕರು ತಸ್ತಿಕ್ ಹಣವನ್ನು ತಹಶೀಲ್ದಾರ್ ಕಚೇರಿಗಳಲ್ಲಿ ಪಡೆಯುತ್ತಿದ್ದಾರೆ. ಗುಮಾಸ್ತರು, ಶಿರಸ್ತೇದಾರರು, ಟ್ರೆಜರಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪಗಳಿವೆ.
ಹೀಗಾಗಿ ಮುಜರಾಗಿ ಇಲಾಖೆ ಆಯುಕ್ತರ ಕಚೇರಿಯಿಂದಲೇ ತಸ್ತಿಕ್ ಹಣ ಪಾವತಿಸುವಂತೆ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರು ಮತ್ತು ಆಗಮಿಕರ ಸಂಘದಿಂದ ಪತ್ರ ಬರೆಯಲಾಗಿತ್ತು.
ಸಿ ದರ್ಜೆ ದೇವಸ್ಥಾನಗಳ ಅರ್ಚಕರ ತಸ್ತಿಕ್ ಹಣ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.