
ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ.
ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಗಳಿಗೆ ಸುತ್ತೋಲೆ ಹೊರಡಿಸಿದೆ.
ಇನ್ನುಮುಂದೆ ದೇವಸ್ಥಾದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಡಬೇಕು ಎಂದು ಸೂಚನೆ ನೀಡಲಾಗಿದೆ.