ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ್ದಾರೆ. ಅವರು ದೇಶಾದ್ಯಂತ ಇರುವ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ಕಚೇರಿಗಳಿಗೆ ರಜೆ ಘೋಷಿಸಿದ್ದಾರೆ.
ಈ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಗಳು ಭಾರತದ ಐತಿಹಾಸಿಕ ಸಮಾರಂಭದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುತ್ತದೆ ಎನ್ನುವ ಉದ್ದೇಶದಿಂದ ರಜೆ ಘೋಷಿಸಲಾಗಿದೆ.
ಜನವರಿ 22 ರಂದು ಕೇಂದ್ರ ಸರ್ಕಾರ ತನ್ನ ಎಲ್ಲಾ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನದ ರಜೆಯನ್ನು ಘೋಷಿಸಿದ ನಂತರ ರಿಲಯನ್ಸ್ ಇಂಡಸ್ಟ್ರೀಸ್ ಈ ಘೋಷಣೆ ಹೊರಡಿಸಿದೆ
“ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಸಮಾರಂಭದ ಸಂದರ್ಭದಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್ಗಳು (ಪಿಎಸ್ಬಿಗಳು), ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು (ಆರ್ಆರ್ಬಿ) ಅರ್ಧ ದಿನ ಮುಚ್ಚಲ್ಪಡುತ್ತವೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜನವರಿ 18 ರಂದು ಹಣಕಾಸು ಸಚಿವಾಲಯ ಈ ಆದೇಶ ಹೊರಡಿಸಿದೆ.
ಮಹಾರಾಷ್ಟ್ರ ಸರ್ಕಾರವು ಸಹ ಈಗಾಗಲೇ ಜನವರಿ 22 ರಂದು ಸಾರ್ವಜನಿಕ ರಜೆ ಎಂದು ಘೋಷಿಸಿದೆ. ಆ ದಿನ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಯಂತ್ರಿತ ಹಣದ ಮಾರುಕಟ್ಟೆಗಳು ಸಹ ಮುಚ್ಚಲ್ಪಡುತ್ತವೆ. ಜನವರಿ 22 ರಂದು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿ (ಎನ್ಎಸ್ಇ) ವಹಿವಾಟು ಸ್ಥಗಿತಗೊಳ್ಳಲಿದೆ.