alex Certify BIG NEWS: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಕಾಂಗ್ರೆಸ್ ನಿಂದ ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಬೇಸರದಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರಿಗೆ ಪತ್ರ ಬರೆದು ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪಕ್ಷಕ್ಕೆ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಪಕ್ಷ ಸೇರಿದಾಗಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸಧ್ಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಎರಡು ದಿನಗಳ ಹಿಂದೆ ಕಾಂಗ್ರೆಸ್ ಮುಖ್ಯಮಮ್ತ್ರಿ ಚಂದ್ರು ಅವರನ್ನು ಸಾಂಸ್ಕೃತಿಕ ಸಮಿತಿ ಚೇರ್ ಮೆನ್ ಆಗಿ ನೇಮಕಗೊಳಿಸಿತ್ತು. ಈ ಬಗ್ಗೆಯೂ ಪತ್ರದಲ್ಲಿ ಬರೆದಿರುವ ಚಂದ್ರು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿದ ಜವಾಬ್ದಾರಿ ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸಲ್ಲ ಎಂದು ತಿಳಿಸಿದ್ದಾರೆ.

ಪಕ್ಷಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೂ ಪಕ್ಷ ತಮಗೆ ಗಮನಿಸದೇ ರಾಜ್ಯಸಭೆ ಟಿಕೆಟ್ ನೀಡಿಲ್ಲ ಎಂಬ ಬೇಸರದಿಂದ ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...