alex Certify BIG NEWS: ಶ್ರೀರಾಮ ಶೋಭಾಯಾತ್ರೆಗೆ ಕಲ್ಲು ತೂರಾಟ, ಮುಳಬಾಗಿಲು ಉದ್ವಿಗ್ನ, ಬಿಗಿ ಭದ್ರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶ್ರೀರಾಮ ಶೋಭಾಯಾತ್ರೆಗೆ ಕಲ್ಲು ತೂರಾಟ, ಮುಳಬಾಗಿಲು ಉದ್ವಿಗ್ನ, ಬಿಗಿ ಭದ್ರತೆ

ಕೋಲಾರ: ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಐಜಿಪಿಯವರು ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ಬಳಿಕ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದು, ಮುಳಬಾಗಿಲು ಪಟ್ಟಣದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಹೆಚ್ಚುವರಿಯಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಕಲ್ಲು ತೂರಾಟದ ವೇಳೆ ಪವರ್ ಕಟ್ ಮಾಡಿರುವ ಕುರಿತು ಪರಿಶೀಲನೆ ನಡೆಸಲಾಗಿದೆ. ಎಲ್ಲವೂ ತನಿಖೆಯ ಹಂತದಲ್ಲಿವೆ ಎಂದು ಹೇಳಿದ್ದಾರೆ.

ಕಲ್ಲುತೂರಾಟ ಪ್ರಕರಣದಲ್ಲಿ ಲಾಠಿ ಚಾರ್ಜ್ ನಡೆದ ರಸ್ತೆಯಲ್ಲಿ ಅಂಗಡಿಗಳ ಗಾಜು ಪುಡಿಯಾಗಿದೆ. ಆಟೋಮೊಬೈಲ್ ಶಾಪ್, ಎರಡು ಕಾರ್ ಗಳ ಗಾಜು ಪುಡಿಯಾಗಿದೆ. ಮುಳಬಾಗಿಲು ಸೋಮೇಶ್ವರ ಪಾಳ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯುವಾಗ ಮಳಿಗೆಗಳಿಗೆ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಕಲೆಹಾಕುತ್ತಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ಕೈಗೊಳ್ಳಲಾಗಿದೆ. 6 ಡಿಎಆರ್, 2 KSRP ತುಕಡಿ, 6 ಪಿಐ, ಇಬ್ಬರು ಡಿವೈಎಸ್ಪಿ ನಿಯೋಜಿಸಿದ್ದು ಘಟನಾ ಸ್ಥಳದಲ್ಲಿ ಕೋಲಾರ ಎಸ್ಪಿ ಮೊಕ್ಕಾಂ ಹೂಡಿದ್ದಾರೆ.

ಶ್ರೀ ರಾಮನವಮಿ ಹಿನ್ನೆಲೆಯಲ್ಲಿ ಮುಳಬಾಗಿಲು ಪಟ್ಟಣದ ಶಿವಕೇಶವ ನಗರದಿಂದ ಅವನಿ ಗ್ರಾಮದವರೆಗೆ ಶೋಭಾಯಾತ್ರೆ ನಡೆಸಲಾಗಿತ್ತು. ಜಹಂಗೀರ್ ಮೊಹಲ್ಲಾದ ಮುಂಭಾಗದಿಂದ ವಿರುಪಾಕ್ಷಿ ರಸ್ತೆಗೆ ಶೋಭಾಯಾತ್ರೆ ತೆರಳುವ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಈ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಪೊಲೀಸರು ಗುಂಪು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...