ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಪರಪ್ಪನ ಅಗ್ರಹಾರದಿಂದ ಇಂದು ಬಿಡುಗಡೆಯಾಗಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಆರೋಪಿ ಶ್ರೀಕಾಂತ್ ಕೂಡ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟೆಂಬರ್ 12ರ ರಾತ್ರಿ ಚೈತ್ರಾಳನ್ನು ಉಡುಪಿಯಲ್ಲಿ ಬಂಧಿಸಲಾಗಿತ್ತು.
ಹಾಲಶ್ರೀ ಸ್ವಾಮೀಜಿಗೆ ನವೆಂಬರ್ 11ರಂದು ಕೋರ್ಟ್ ಜಾಮೀನು ನೀಡಿತ್ತು. ಇದೀಗ ಪ್ರಕರಣದ ಮೊದಲ ಆರೋಪಿ ಚೈತ್ರಾ ಮತ್ತು ಏಳನೇ ಆರೋಪಿ ಶ್ರೀಕಾಂತ್ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನಾನು ಹಿಂದೂ ಸಂಘಟನೆಯಲ್ಲಿರುವುದರಿಂದ BJP, RSS ವರಿಷ್ಠರಿಗೂ ಹತ್ತಿರವಿದ್ದೇನೆ. ಪ್ರಧಾನಿ ಕಚೇರಿಯಲ್ಲೂ ಪ್ರಭಾವಿಯಾಗಿದ್ದು, ಸುಪ್ರೀಂ ಕೋರ್ಟ್ ಜಡ್ಜ್ಗಳಿಗೂ ಆಪ್ತಳಾಗಿದ್ದೇನೆ. ಅವರೆಲ್ಲರ ಪ್ರಭಾವ ಬಳಸಿ ಟಿಕೆಟ್ ಕೊಡಿಸುತ್ತೇನೆ ಎಂದು ಚೈತ್ರಾ ನಂಬಿಸಿದ್ದಳು.
ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಹಿಂದೂ ಹೋರಾಟಗಾರ್ತಿ ಚೈತ್ರಾ ಹಣ ಪಡೆದಿರುವ ಬಗ್ಗೆ ತಪ್ಪೊಪ್ಪಿಕೊಂಡಳು. ಪ್ರಕರಣದ 7ನೇ ಆರೋಪಿಯಾಗಿರುವ ಶ್ರೀಕಾಂತ್, ಉದ್ಯಮಿ ಗೋವಿಂದ ಪೂಜಾರಿ ಬಳಿಯಿಂದ ಹಣ ಪಡೆದಿದ್ದು, ಸಿಸಿಬಿ ವಿಚಾರಣೆ ವೇಳೆ ಉದ್ಯಮಿಯಿಂದ ಹಣ ಪಡೆದಿದ್ದು ನಾನೇ. ಆದರೆ 5ಕೋಟಿಯಲ್ಲ 3 ಕೋಟಿ ಹಣ ಪಡೆದಿದ್ದಾಗಿ ಹೇಳಿದ್ದನು.