ಹಿಂದಿ, ತೆಲುಗು, ತಮಿಳು, ಹಾಗೂ ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಖಳನಾಯಕನ ಪಾತ್ರದಿಂದಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟ ಸೋನು ಸೂದ್ ಇಂದು ತಮ್ಮ 51ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.
1999ರಲ್ಲಿ ತೆರೆಕಂಡ ‘ಕಲ್ಲಜಗರ್’ ಎಂಬ ತಮಿಳು ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು ವಿಜಯ್ ಅಭಿನಯದ ‘ನೆಂಜಿನಿಲೆ’ ನಲ್ಲಿ ತೆರೆ ಹಂಚಿಕೊಂಡರು. ಬಳಿಕ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಹೆಸರು ಮಾಡಿದರು.
2011 ರಲ್ಲಿ ಕಿಚ್ಚ ಸುದೀಪ್ ಅಭಿನಯದ ‘ವಿಷ್ಣುವರ್ಧನ’ ದಲ್ಲಿ ಆದಿಶೇಷ ಎಂಬ ಖಳನಾಯಕನ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಳೆದ ವರ್ಷ ‘ಶ್ರೀಮಂತ’ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದರು. ಇತ್ತೀಚಿಗೆ ‘ಫತೇಹ್’ ಎಂಬ ಹಿಂದಿ ಚಿತ್ರವನ್ನು ನಿರ್ದೇಶಿಸುವ ಮೂಲಕ ಇದೇ ಮೊಟ್ಟ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿದ್ದಾರೆ.
ಸಾಮಾಜಿಕ ಸೇವೆಗಳಿಂದಲೂ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ಸೋನು ಸೂದ್ ಅವರಿಗೆ ದೇಶಾದ್ಯಂತ ಅಭಿಮಾನಿಗಳ ದಂಡೆ ಇದೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
https://twitter.com/santoshamsuresh/status/1818172487777341549?ref_src=twsrc%5Egoogle%7Ctwcamp%5Eserp%7Ctwgr%5Etweet
https://twitter.com/SunielVShetty/status/1818163786794353034?ref_src=twsrc%5Egoogle%7Ctwcamp%5Eserp%7Ctwgr%5Etweet