alex Certify ಹುಟ್ಟು ಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಪ್ರಿಯಾಮಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟು ಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಪ್ರಿಯಾಮಣಿ

Priyamani: ನಟಿ ಪ್ರಿಯಾಮಣಿ ಬದುಕನ್ನೇ ಬದಲಿಸಿತು ಆ ಒಂದು ನಿರ್ಧಾರ - The family man changed life of priyamani she may part of pawan kalyan 28th film rmd Kannada News

ಕನ್ನಡ ಸೇರಿದಂತೆ ತೆಲಗು, ತಮಿಳು, ಮಲಯಾಳಂ ಹಾಗೂ ಹಿಂದಿ ಚಿತ್ರರಂಗದಲ್ಲಿ  ತಮ್ಮದೇ ಆದ ಚಾಪು ಮೂಡಿಸಿರುವ  ಪಂಚ ಭಾಷಾ ತಾರೆ ಪ್ರಿಯಾಮಣಿ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2003 ರಲ್ಲಿ ತೆರೆ ಕಂಡ ತಮಿಳಿನ “ಉಲ್ಲಂ”  ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು ಅದೇ ವರ್ಷದಲ್ಲಿ ‘ಎವರೆ ಅಟಗಾಡು’ ನಲ್ಲಿ ತೆರೆ ಹಂಚಿಕೊಂಡರು. ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದ ಪ್ರಿಯಾಮಣಿ 2009 ರಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೊತೆ ‘ರಾಮ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದರು.

ನಟಿ ಪ್ರಿಯಾಮಣಿ ಇತ್ತೀಚಿಗೆ ತಮಿಳಿನ ‘ಕೊಟೇಶನ್ ಗ್ಯಾಂಗ್’ ಸೇರಿದಂತೆ ಕನ್ನಡದಲ್ಲಿ ‘ಕೈಮಾರ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.  ಇಂದು  ಸಾಮಾಜಿಕ ಜಾಲತಾಣದಲ್ಲಿ ಹಲವಾರು ಕಲಾವಿದರು ಪ್ರಿಯಮಣಿಯವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...