ಸೋಮವಾರ ಬೆಳಗ್ಗೆ ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ವಿಷ ಅನಿಲ ಸೋರಿಕೆಯಾಗಿದೆ. ಇದರಿಂದ ಸ್ಥಳದಲ್ಲಿದ್ದ ಮೂರು ಜನರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ, ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾರಾಯಣನಗರದ ಕುರ್ಲಾ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಬೆಳಿಗ್ಗೆ 8.15 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಲ್ಲಿ ಮೆಥನಾಲ್ ಮತ್ತು ಸೈನೂರಿಕ್ ಕ್ಲೋರೈಡ್ ಸೋರಿಕೆಯಾಗಿದೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಆ ಪ್ರದೇಶದಲ್ಲಿದ್ದ ಮೂವರು ವಿಷಾನಿಲವನ್ನ ಸೇವಿಸಿದ್ದಾರೆ. ವಿಷಯ ತಿಳಿದ ತಕ್ಷಣ, ಮೂವರನ್ನು ಸಮೀಪದ ರಾಜವಾಡಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
2021ರಲ್ಲಿ ರೈಲ್ವೆ ಪೊಲೀಸರು ರಕ್ಷಿಸಿದ್ದು ಒಟ್ಟು 601 ಜೀವಗಳು
ಮೃತರನ್ನು 36 ವರ್ಷದ ರಾಮನಿವಾಸ್ ಸರೋಜ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ವ್ಯಕ್ತಿಗಳಾದ ರೂಬಿನ್ ಸೋಲ್ಕರ್ (36) ಮತ್ತು ಸರ್ವಾಂಶ್ ಸೋನಾವನೆ (25) ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಅನಿಲ ಸೋರಿಕೆಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.